ರಾಜ್ಕೋಟ್(ಗುಜರಾತ್):ಇಲ್ಲಿನ ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಆರು ಜನ ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 6 ಮಂದಿ ಸೋಂಕಿತರು ದುರ್ಮರಣ - 6 patients died in fire breaks out news
ಗುಜರಾತ್ನ ರಾಜ್ಕೋಟ್ನ ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಆರು ಜನ ರೋಗಿಗಳು ಮೃತಪಟ್ಟಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಈ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ 11 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ಬೆಂಕಿ ಅವಘಡದಿಂದ 6 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ 33 ಜನ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.