ಶ್ರೀನಗರ(ಜಮ್ಮು-ಕಾಶ್ಮೀರ):ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಕೇಶ್ವಾನ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಗೆ ಸಂಬಂಧಿಸಿದಂತೆ ಡೆಪ್ಯುಟಿ ಕಮಿಷನರ್ ಅಶೋಕ್ ಕುಮಾರ್ ಶರ್ಮಾ ಮಾಹಿತಿ ನೀಡಿದ್ದಾರೆ.
ಮೃತರನ್ನ ಮೊಹಮ್ಮದ್ ಅರ್ಖಾನ್(29), ಅಬ್ದುಲ್ ರೆಹಮಾನ್(29), ಅಬ್ದುಲ್ ಲತೀಫ್(42), ಮೊಹಮ್ಮದ್(22), ಇನಾಮ್(45) ಮತ್ತು ಜಮೀರ್(18) ಎಂದು ಗುರುತಿಸಲಾಗಿದೆ.
ಇದನ್ನೂ ಓದಿರಿ:'ಗೋಮೂತ್ರ ಕುಡಿದು ಸಿದ್ಧರಾಗಿರಿ' ಎಂದಿದ್ದ TMC ಸಂಸದೆ ಲೋಕಸಭೆಯಲ್ಲಿ ಮಾತನಾಡಿದ್ದೇನು!?
ಅಪಘಾತ ನಡೆದ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮತ್ತು ಸೇನಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ಐವರ ಮೃತದೇಹಗಳನ್ನ ಹೊರತೆಗೆದಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ವ್ಯಕ್ತಿಯೋರ್ವನನ್ನ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದಾಗ ನಡುರಸ್ತೆಯಲ್ಲಿ ಪ್ರಾಣ ಬಿಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.