ತೆಹ್ರಿ ಗರ್ವಾಲ್ (ಉತ್ತರಾಖಂಡ): ಬೊಲೆರೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದು ನಂತರ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಜನರ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಬಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಕಂದಕಕ್ಕೆ ಉರುಳಿ ಬಿದ್ದ ಬೊಲೆರೋದಲ್ಲಿ ಕಾಣಿಸಿಕೊಂಡ ಬೆಂಕಿ: ಆರು ಜನರ ದುರ್ಮರಣ - ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆ
ಈ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ಇಲ್ಲಿನ ಕಂಡಿಸೌರ್ ಉರುಳಿ ಬಿದ್ದಿದೆ. ಬಿದ್ದ ತಕ್ಷಣವೇ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಚಂಬಾದಿಂದ ಉತ್ತರಕಾಶಿ ಕಡೆಗೆ ಕಾರು ಪ್ರಯಾಣಿಸುತ್ತಿತ್ತು. ಈ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ಇಲ್ಲಿನ ಕಂಡಿಸೌರ್ ಉರುಳಿ ಬಿದ್ದಿದೆ. ಬಿದ್ದ ತಕ್ಷಣವೇ ವಾಹನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಕಂಡ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ, ಅಷ್ಟೊತ್ತಿಗಾಗಲೇ ಆರು ಮಂದಿ ಬೆಂಕಿಯಲ್ಲಿ ಸುಟ್ಟು ಹೋಗಿದ್ದರು. ಸ್ಥಳಕ್ಕೆ ಪೊಲೀಸರು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಗನ್ಮ್ಯಾನ್ ಟೀ ಕುಡಿಯಲು ಹೋದಾಗ ಬಿಜೆಪಿ ಎಸ್‌ಸಿ-ಎಸ್‌ಟಿ ವಿಭಾಗದ ಮುಖಂಡನ ಕೊಲೆ