ಆಲ್ವರ್ (ರಾಜಸ್ಥಾನ):ನೆರೆಮನೆಯ ವ್ಯಕ್ತಿಯಿಂದಲೇ 6 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ರಾಜಸ್ಥಾನದ ಆಳ್ವಾರ್ ಜಿಲ್ಲೆಯ ಕಥುಮರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಆಲ್ವರ್ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ಮಾಹಿತಿ ನೀಡಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಮಧ್ಯಾಹ್ನ 12.30ರ ಸುಮಾರಿಗೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.