ಜಲಂಧರ್: ಇಂದು ಜಲಂಧರ್ ಬಿಎಂಸಿ ಚೌಕದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಪ್ರತಿಮೆಯ ಮೇಲೆ ಅಪರಿಚಿತರು ಖಲಿಸ್ತಾನ್ ಜಿಂದಾಬಾದ್ ಮತ್ತು ಹಿಂದೂಸ್ತಾನ್ ಮುರ್ದಾಬಾದ್ ಎಂಬ ಘೋಷಣೆಗಳನ್ನು ಬರೆದಿದ್ದಾರೆ.
ಇದರ ಸಮೀಪದಲ್ಲಿದ್ದ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಬ್ಯಾನರ್ ನಲ್ಲೂ ಈ ಘೋಷಣೆಗಳನ್ನು ಬರೆಯಲಾಗಿತ್ತು. ಮತ್ತೊಂದೆಡೆ ಸಿಖ್ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥ ಗುರ್ಪತ್ವಂತ್ ಸಿಂಗ್ ಪನ್ನು ಅವರು ಪಂಜಾಬ್ ಡಿಜಿಪಿ ಗೌರವ್ ಯಾದವ್ ಸೇರಿದಂತೆ ಹಲವರಿಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಸದ್ಯ ಪೊಲೀಸರು ಈ ಪ್ರಕರಣದ ತನಿಖೆಯಲ್ಲಿ ತೊಡಗಿದ್ದಾರೆ.