ಭೋಪಾಲ್: ಮಧ್ಯಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಓಜಾ ರಾಜೀನಾಮೆ ನೀಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಹಾಗೂ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡುವಂತೆ ತಮ್ಮನ್ನು ಬಲವಂತ ಮಾಡಲಾಗಿದೆ ಎಂದೂ ಶೋಭಾ ಓಜಾ ಆರೋಪಿಸಿದ್ದಾರೆ.
ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ: ಬಿಜೆಪಿ ಸರ್ಕಾರ ಕೆಲಸ ಮಾಡಲು ಬಿಡುತ್ತಿಲ್ಲ ಎಂದ ಶೋಭಾ - ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ
ಪ್ರಕರಣವೊಂದರ ವಿಚಾರಣೆಯ ಸಮಯದಲ್ಲಿ ಆಯೋಗದ ಕನಿಷ್ಠ ಇಬ್ಬರು ಸದಸ್ಯರು ಹಾಜರಿರಬೇಕು. ಆದರೆ ಕಳೆದ ಎರಡು ವರ್ಷಗಳಿಂದ ಸರ್ಕಾರಿ ನಾಮನಿರ್ದೇಶಿತ ಸದಸ್ಯರು ಮಾತ್ರ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದಾರೆ. ನೊಂದವರಿಗೆ ನ್ಯಾಯ ಒದಗಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಸರ್ಕಾರವೇ ಅಡ್ಡಿಯುಂಟುಮಾಡುತ್ತಿದೆ ಎಂದು ಶೋಭಾ ಓಜಾ ಆರೋಪಿಸಿದ್ದಾರೆ.
ತಾವು ಮಹಿಳಾ ಆಯೋಗದ ಅಧ್ಯಕ್ಷೆಯಾದಾಗ ಮಧ್ಯಪ್ರದೇಶದಲ್ಲಿ 10 ಸಾವಿರ ಮಹಿಳಾ ದೌರ್ಜನ್ಯ ಪ್ರಕರಣಗಳಿದ್ದವು. ಈಗ ಈ ಸಂಖ್ಯೆ 17 ಸಾವಿರ ದಾಟಿದೆ. ತಮಗೆ ಕರ್ತವ್ಯ ನಿರ್ವಹಿಸಲು ಬಿಡದ ಕಾರಣದಿಂದಲೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಿಳಾ ಆಯೋಗವು ಕಾಯ್ದೆಯ ಪ್ರಕಾರ ಕಾರ್ಯನಿರ್ವಹಿಸಬೇಕು. ಆದರೆ ಪ್ರಕರಣಗಳ ವಿಚಾರಣೆಯಲ್ಲಿ ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರು ಮೆಲುಗೈ ಸಾಧಿಸಿದ್ದು, ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಪ್ರಕರಣವೊಂದರ ವಿಚಾರಣೆಯ ಸಮಯದಲ್ಲಿ ಆಯೋಗದ ಕನಿಷ್ಠ ಇಬ್ಬರು ಸದಸ್ಯರು ಹಾಜರಿರಬೇಕು. ಆದರೆ ಕಳೆದ ಎರಡು ವರ್ಷಗಳಿಂದ ಸರ್ಕಾರಿ ನಾಮನಿರ್ದೇಶಿತ ಸದಸ್ಯರು ಮಾತ್ರ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದಾರೆ. ನೊಂದವರಿಗೆ ನ್ಯಾಯ ಒದಗಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಸರ್ಕಾರವೇ ಅಡ್ಡಿಯುಂಟುಮಾಡುತ್ತಿದೆ ಎಂದು ಅವರು ದೂರಿದ್ದಾರೆ.
ಬಿಜೆಪಿ ಮುಖಂಡರು, ಕಾರ್ಯಕರ್ತರು ಆರೋಪಿಗಳಾಗಿರುವ ಪ್ರಕರಣಗಳಲ್ಲಿ ಅವರ ಪರವಾಗಿ ನಿರ್ಧಾರ ಕೈಗೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ. 2020ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನನ್ನನ್ನು ಹೊರಹಾಕುವ ಪ್ರಯತ್ನ ಮಾಡಲಾಯಿತು. ಆದರೆ ಹೈಕೋರ್ಟ್ ಆದೇಶದ ಕಾರಣದಿಂದ ನಾನು ಮುಂದುವರಿಯುವಂತಾಯಿತು. ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ನಾನು ಇನ್ಮುಂದೆ ಬೀದಿಗಿಳಿದು ಹೋರಾಡಲಿದ್ದೇನೆ ಎಂದು ಓಜಾ ಹೇಳಿದ್ದಾರೆ.