ಭೋಪಾಲ್ (ಮಧ್ಯಪ್ರದೇಶ): ''ವಿದೇಶಿ ಮಹಿಳೆಯಿಂದ ಹುಟ್ಟಿದ ಮಗ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ'' ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ರಾಹುಲ್ ಗಾಂಧಿ ವಿರುದ್ಧ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಈ ನನ್ನ ಮಾತನ್ನು ಸಂಪೂರ್ಣವಾಗಿ ಸಾಬೀತು ಪಡಿಸಿದ್ದಾರೆ. ರಾಹುಲ್ ಭಾರತದವರಲ್ಲ ಎಂಬುದನ್ನು ನಾವು ಒಪ್ಪುತ್ತೇವೆ. ನೀವು ಭಾರತದವರಲ್ಲ ಎಂದು ನಮಗೆ ತಿಳಿದಿದೆ. ವಿದೇಶಿ ಮಹಿಳೆಗೆ ಜನಿಸಿದ ಮಗ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದ ಅವರು, ರಾಹುಲ್ ಗಾಂಧಿ ಅದನ್ನು ಸಾಬೀತುಪಡಿಸಿದ್ದಾರೆ'' ಎಂದು ಪ್ರಜ್ಞಾ ಸಿಂಗ್ ಠಾಕೂರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಮೂಲಕ ಪ್ರಜ್ಞಾ ಸಿಂಗ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ:ಭಾರತದ ರಾಜಕೀಯ ಪರಿಸ್ಥಿತಿಯ ಕುರಿತು ಯುಕೆಯಲ್ಲಿ ಅವರು ಮಾಡಿದ ಕಮೆಂಟ್ಗಳ ಕುರಿತು ಮಾಜಿ ಕಾಂಗ್ರೆಸ್ ಮುಖ್ಯಸ್ಥರ ವಿರುದ್ಧ ವಾಗ್ದಾಳಿ ನಡೆಸಿದ ಠಾಕೂರ್, ''ದೇಶ ಮತ್ತು ಅವರ ಆಯ್ಕೆ ಮಾಡಿದ ಜನರನ್ನು ಅವಮಾನಿಸಿದ್ದಾರೆ'' ಎಂದು ಆರೋಪಿಸಿದರು. ಕಾಂಗ್ರೆಸ್ ಹಲವಾರು ದಶಕಗಳ ಕಾಲ ದುರಾಡಳಿತ ನಡೆಸಿದೆ ಎಂದು ಕಿಡಿಕಾರಿದರು. ವಿದೇಶಗಳಲ್ಲಿ ಮಾತನಾಡಿದ ರಾಹುಲ್ ಗಾಂಧಿಗೆ, ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿಲ್ಲವಂತೆ'' ಎಂದು ವ್ಯಂಗ್ಯವಾಡಿದರು.
"ಭಾರತದ ಜನರು ನಿಮ್ಮನ್ನು ಆಯ್ಕೆ ಮಾಡಿದ್ದರು. ಆದರೆ, ನೀವು ದೀರ್ಘಕಾಲದವರೆಗೆ ಅಧಿಕಾರದಲ್ಲಿದ್ದು ದೇಶವನ್ನು ಕೊಳ್ಳೆ ಹೊಡೆದಿದ್ದಿರು. ಆದರೆ, ಈಗ ವಿದೇಶಗಳಲ್ಲಿ ರಾಹುಲ್ ಗಾಂಧಿಗೆ ದೇಶದ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಸಂಸದೆ, ಅವರಿಗೆ ದೇಶದಲ್ಲಿ ರಾಜಕೀಯ ಮಾಡಲು ಬಿಡಬಾರದು ಮತ್ತು ಅವರನ್ನು ಭಾರತದಿಂದ ಹೊರಹಾಕಬೇಕು. ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ನಾನು ತೀವ್ರ ಖಂಡಿಸುತ್ತೇನೆ.