ನವದೆಹಲಿ :ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ಆರಂಭವಾಗಿದ್ದು, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್, ಅಜಯ್ ಮಕೇನ್, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ ಸೇರಿ ಹಲವರು ಪಾಲ್ಗೊಂಡಿದ್ದಾರೆ. ಗಮನಾರ್ಹ ಬೆಳೆವಣಿಗೆ ಎಂದರೆ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಲಾಗಿದೆ.