ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು - Covid related issues

ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ ಎಂದು ಕಾಂಗ್ರೆಸ್​ ಪಕ್ಷ ತಿಳಿಸಿದೆ.

Sonia Gandhi  admitted In Hospital
ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

By

Published : Jun 12, 2022, 3:07 PM IST

ನವದೆಹಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ ಎಂದು ಕಾಂಗ್ರೆಸ್​ ಪಕ್ಷ ತಿಳಿಸಿದೆ.

ಸೋನಿಯಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಸ್ವತಃ ಪಕ್ಷದ ಹಿರಿಯ ನಾಯಕ ರಂದೀಪ್ ಸಿಂಗ್​ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ವೈದ್ಯರ ನಿಗಾಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ.

ಸೋನಿಯಾ ಬಗ್ಗೆ ಕಾಳಜಿ ತೋರಿ ಪ್ರಾರ್ಥಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾರ್ಯಕರ್ತೆಯರು ಹಾಗೂ ಎಲ್ಲ ಹಿತೈಷಿಗಳಿಗೆ ಧನ್ಯವಾದ ಎಂದು ಸುರ್ಜೇವಾಲಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ: ಶರದ್ ಪವಾರ್‌, ಮಮತಾ ಮೊರೆ ಹೋದ ಸೋನಿಯಾ ಗಾಂಧಿ

ABOUT THE AUTHOR

...view details