ನವದೆಹಲಿ :ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಾಣುವ ಮೂಲಕ ತೀವ್ರ ಮುಖಭಂಗಕ್ಕೊಳಗಾಗಿದೆ. ಇದರ ಬೆನ್ನಲ್ಲೇ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆಂದು ಪಕ್ಷದ ಮುಖಂಡ ರಂದೀಪ್ ಸುರ್ಜೇವಾಲ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿರಿ:ಉಕ್ರೇನ್ನಿಂದ ವಾಪಸ್ ಆದ 740 ವೈದ್ಯಕೀಯ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಕೊಟ್ಟ ಸಿಎಂ ಕೆಸಿಆರ್!
ಪಂಚರಾಜ್ಯಗಳಲ್ಲಿ ಸೋಲಿನ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಕಳೆದ ಭಾನುವಾರ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಲಾಗಿತ್ತು. ಈ ವೇಳೆ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಸೋಲು ಕಂಡಿರುವ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರನ್ನ ವಜಾಗೊಳಿಸಲು ನಿರ್ಧರಿಸಲಾಗಿದೆ.
ಪಂಜಾಬ್ನಲ್ಲಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ವಿರುದ್ಧ ಹೀನಾಯ ಸೋಲು ಕಂಡಿದ್ದು, ಕೇವಲ 18 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದೆ. ಉಳಿದಂತೆ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕೇವಲ 2 ಸ್ಥಾನ, ಗೋವಾದಲ್ಲಿ 11, ಉತ್ತರಾಖಂಡದಲ್ಲಿ 19, ಮಣಿಪುರದಲ್ಲಿ 5 ಸ್ಥಾನಗಳಲ್ಲಿ ಮಾತ್ರ ಗೆದ್ದಿದೆ.