ನವದೆಹಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ ಅವರಿಗೆ ಉಸಿರಾಟ ಸಂಬಂಧ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ತಿಳಿಸಿದೆ.
ಪ್ರಸ್ತುತ, ಕೋವಿಡ್ ನಂತರದ ರೋಗಲಕ್ಷಣಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಉಸಿರಾಟದ ಸಮಸ್ಯೆಯೂ ಎದುರಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ನಿಗಾ ಇರಿಸಿದ್ದಾರೆಂದು ಕಾಂಗ್ರೆಸ್ ತಿಳಿಸಿದೆ.