ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್​​ಗೆ ನಾನೇ ಪೂರ್ಣಾವಧಿ ಅಧ್ಯಕ್ಷೆ: ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೋನಿಯಾ ಇಂಗಿತ - ಲಖಿಂಪುರ್-ಖೇರಿ

ನವದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕಾರಿ ಸಮಿತಿಯ ಸಭೆ ಆರಂಭಗೊಂಡಿದ್ದು ಹಲವು ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಮುಂಬರುವ ಚುನಾವಣೆ ಕುರಿತ ಚರ್ಚೆ ಪ್ರಮುಖ ವಿಷಯ ವಸ್ತುವಾಗಿದೆ. ಈ ವೇಳೆ ಪಕ್ಷದ ನಾಯಕರು ಒಪ್ಪಿದರೆ ತಾನೇ ಪೂರ್ಣಾವಧಿ ಅಧ್ಯಕ್ಷೆಯಾಗಿ ಮುಂದುವರಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

sonia-gandhi-chaired-congress-working-committee-meeting-in-delhi
ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

By

Published : Oct 16, 2021, 12:25 PM IST

Updated : Oct 16, 2021, 2:27 PM IST

ನವದೆಹಲಿ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿದ್ದು, ತಾವೇ ಅಧ್ಯಕ್ಷೆಯಾಗಿ ಮುಂದುವರಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಭೆಗೆ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ ಮತ್ತು ಛತ್ತೀಸ್​​ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಭೆಯಲ್ಲಿ ಭಾಗಿಯಾಗಲು ಕಚೇರಿಗೆ ಆಗಮಿಸಿದರು. ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಕೂಡ ಹಾಜರಾಗಿದ್ದಾರೆ.

ಪ್ರಸ್ತುತ ರಾಜಕೀಯ ಪರಿಸ್ಥಿತಿ, ಮುಂದಿನ ವಿಧಾನಸಭೆ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ. ಕೋವಿಡ್ ಬಳಿಕ ಕಾಂಗ್ರೆಸ್ ಹಮ್ಮಿಕೊಂಡಿರುವ ಮೊದಲ ಸಿಡಬ್ಲ್ಯೂಸಿ ಸಭೆ ಇದಾಗಿದೆ. ಸಭೆಯಲ್ಲಿ 52 ನಾಯಕರು ಭಾಗಿಯಾಗುತ್ತಿದ್ದು, ಮನ್​​ಮೋಹನ್ ಸಿಂಗ್, ದಿಗ್ವಿಜಯ್ ಸಿಂಗ್ ಸೇರಿ ಐವರು ನಾಯಕರು ಭಾಗಿಯಾಗುತ್ತಿಲ್ಲ ಎಂದು ತಿಳಿದುಬಂದಿದೆ.

ಈ ಸಭೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸುವ ಕುರಿತಂತೆಯೂ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಸಭೆಯಲ್ಲಿ ಮಾತನಾಡಿದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ನೀವು ಒಪ್ಪಿದರೆ, ಕಾಂಗ್ರೆಸ್​​ಗೆ ನಾನೇ ಪೂರ್ಣಾವಧಿ ಹಾಗೂ ಸಕ್ರಿಯ ಅಧ್ಯಕ್ಷೆಯಾಗಿರುವೆ ಎಂದಿದ್ದಾರೆ. ಈ ಮೂಲಕ ಈ ಹಿಂದೆ ಕಾಂಗ್ರೆಸ್​ನಲ್ಲಿ ಅಧ್ಯಕ್ಷರು ಯಾರೆಂದು ತಿಳಿಯುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್​​ನಲ್ಲಿ ಕೇಳಿಬರುತ್ತಿದ್ದ ಅಸಮಾಧಾನ ಕೊನೆಗಾಣಿಸುವ ಪ್ರಯತ್ನ ಮಾಡಿದ್ದಾರೆ.

ಮುಂದುವರೆದು, ಇಡೀ ಸಂಸ್ಥೆಯು ಕಾಂಗ್ರೆಸ್ಸಿನ ಪುನರುಜ್ಜೀವನವನ್ನು ಬಯಸುತ್ತದೆ. ಆದರೆ ಇದಕ್ಕೆ ಒಗ್ಗಟ್ಟು ಮತ್ತು ಪಕ್ಷದ ಹಿತಾಸಕ್ತಿಗಳನ್ನು ಪ್ರಮುಖವಾಗಿರಿಸಿಕೊಳ್ಳುವುದು ಅಗತ್ಯವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಇಂದು ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ ಎಂದಿದ್ದಾರೆ.

ಮುಂದುವರೆದು, ಇತ್ತೀಚೆಗೆ ಲಖಿಂಪುರ್-ಖೇರಿಯಲ್ಲಿ ನಡೆದ ಆಘಾತಕಾರಿ ಘಟನೆಗಳು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಈ ನಡುವೆ ಸೆಪ್ಟೆಂಬರ್ 2022ರಲ್ಲಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಕೈ ನಾಯಕ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿಗೆ ಪಕ್ಷ ಮುನ್ನಡೆಸಬೇಕು ಎಂಬ ಪ್ರಸ್ತಾಪ ಮುಂದಿಟ್ಟಿದ್ದಾರೆ ಎನ್ನಲಾಗ್ತಿದೆ. ಆದರೆ ಗುಲಾಮ್ ನಬಿ ಆಜಾದ್​​ ಸೋನಿಯಾ ಗಾಂಧಿಯೇ ನಮ್ಮ ನಾಯಕರು, ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಮುನ್ನಡೆಯಲಿದೆ ಎಂದಿದ್ದಾರೆ.

Last Updated : Oct 16, 2021, 2:27 PM IST

ABOUT THE AUTHOR

...view details