ಚಂಡೀಗಢ(ಪಂಜಾಬ್):ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾ. ಅಮರೀಂದರ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪಕ್ಷದ ಹಿರಿಯ ಮುಖಂಡ ರಂದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿದ್ದಾರೆ. ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದು ಸೋನಿಯಾ ಗಾಂಧಿ ಅಲ್ಲ, ಬದಲಾಗಿ ಪಂಜಾಬ್ನ 78 ಶಾಸಕರು ಎಂದಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ತಮ್ಮನ್ನ ಅವಮಾನಕರವಾಗಿ ನಡೆಸಿಕೊಂಡಿದೆ ಎಂದು ಅಮರೀಂದರ್ ಸಿಂಗ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ರಾಜ್ಯದ ಮುಖ್ಯಮಂತ್ರಿ ತಮ್ಮ ಶಾಸಕರ ವಿಶ್ವಾಸ ಕಳೆದುಕೊಂಡಾಗ ಆ ಸ್ಥಾನದಲ್ಲಿ ಉಳಿದುಕೊಳ್ಳಬಾರದು ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಪಂಜಾಬ್ ಸಿಎಂ ಬದಲಾವಣೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.