ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಎರಡನೇ ಸಲ ವಕ್ಕರಿಸಿದ ಕೊರೊನಾ - ETV bharat kannada news

ಕಾಂಗ್ರೆಸ್​ ಹಂಗಾಮಿ ಸೋನಿಯಾ ಗಾಂಧಿ ಅವರಿಗೆ ಎರಡನೇ ಬಾರಿಗೆ ಕೊರೊನಾ ಕಾಣಿಸಿಕೊಂಡಿದೆ. ಕೆಲ ದಿನಗಳ ಹಿಂದಷ್ಟೇ ಅವರು ಸೋಂಕಿನಿಂದ ಗುಣಮುಖರಾಗಿದ್ದರು.

sonia-gandhi-tested-covid-positive-again
ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಎರಡನೇ ಸಲ ವಕ್ಕರಿಸಿದ ಕೊರೊನಾ

By

Published : Aug 13, 2022, 2:41 PM IST

ನವದೆಹಲಿ:ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೊನಾ ವೈರಸ್​ ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಇದರಿಂದ ಅವರು ಮನೆಯಲ್ಲಿಯೇ ಐಸೋಲೇಟ್​ ಆಗಿದ್ದಾರೆ ಎಂದು ಪಕ್ಷ ತಿಳಿಸಿದೆ.

ನ್ಯಾಷನಲ್ಡ್​ ಹೆರಾಲ್ಡ್​ ಹಗರಣ ಕುರಿತಂತೆ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವ ಮೊದಲು ಕೊರೊನಾ ತುತ್ತಾಗಿ ಬಳಿಕ ಚೇತರಿಸಿಕೊಂಡಿದ್ದರು. ಬಳಿಕ ವೈದ್ಯರ ನೇತೃತ್ವದಲ್ಲಿ ಮೂರು ದಿನ ಇಡಿ ವಿಚಾರಣೆ ಎದುರಿಸಿದ್ದರು. ಇದೀಗ ಎರಡನೇ ಬಾರಿಗೆ ಕೊರೊನಾ ತಗುಲಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ತಿಳಿಸಿದರು.

ಕೆಲ ದಿನಗಳ ಹಿಂದಷ್ಟೇ ಪುತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೋವಿಡ್ ತಗುಲಿತ್ತು. ಈ ಬಗ್ಗೆ ಅವರು ಟ್ವೀಟ್​ ಮಾಡಿ ಬಹಿರಂಗಪಡಿಸಿದ್ದರು.

ಓದಿ:ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು.. ಸಿಎಂ ಬಸವರಾಜ ಬೊಮ್ಮಾಯಿ ಕರೆ

ABOUT THE AUTHOR

...view details