ಕರ್ನಾಟಕ

karnataka

ETV Bharat / bharat

ಯುಪಿ ಚುನಾವಣೆ 2022 : ತವರು ಕ್ಷೇತ್ರ ರಾಯ್‌ಬರೇಲಿ ಮತದಾರರನ್ನು ಉದ್ದೇಶಿಸಿ ಸೋನಿಯಾ ಗಾಂಧಿ ಮಾತು - ಯುಪಿ ಚುನಾವಣೆ 2022: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ರಾಯ್ ಬರೇಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು

ಸಾರ್ವಜನಿಕರ ಹೊರೆಯನ್ನು ಕಡಿಮೆ ಮಾಡುವ ಬದಲು ಜನರ ಶ್ರಮದಿಂದ ಮಾಡಿದ ಸಾರ್ವಜನಿಕ ಸಂಸ್ಥೆಗಳನ್ನು ಕಾಸಿನ ಬೆಲೆಗೆ ಕೇಂದ್ರ ಸರ್ಕಾರ ಮಾರಾಟ ಮಾಡುತ್ತಿದೆ..

Sonia Gandhi addresses Congress workers
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ

By

Published : Feb 21, 2022, 3:38 PM IST

ನವದೆಹಲಿ :ಉತ್ತರಪ್ರದೇಶದ ರಾಯ್‌ಬರೇಲಿಯ ಮತದಾನಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಯೋಗಿ ಸರ್ಕಾರವನ್ನು ಗುರಿಯಾಗಿಸಿ ಮಾತನಾಡಿದರು. ಯುವಕರ ನಿರುದ್ಯೋಗ ಸಮಸ್ಯೆ ಬಗ್ಗೆ ಯೋಗಿ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದರು.

ಸೋನಿಯಾ ಗಾಂಧಿ ರಾಯ್ ಬರೇಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವುದು..

ಕೋವಿಡ್​ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ಅನೇಕರು ತಮ್ಮ ಕುಟುಂಬವನ್ನು ಕಳೆದುಕೊಳ್ಳಬೇಕಾಯಿತು ಎಂದು ಸೋನಿಯಾ ಗಾಂಧಿ ದೂರಿದರು.

ಇದೇ ಸಂದರ್ಭದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಸಾರ್ವಜನಿಕರ ಹೊರೆಯನ್ನು ಕಡಿಮೆ ಮಾಡುವ ಬದಲು ಜನರ ಶ್ರಮದಿಂದ ಮಾಡಿದ ಸಾರ್ವಜನಿಕ ಸಂಸ್ಥೆಗಳನ್ನು ಕಾಸಿನ ಬೆಲೆಗೆ ಮಾರಾಟ ಮಾಡಿದೆ ಎಂದರು. ರಾಯ್ ಬರೇಲಿಯನ್ನು ನನ್ನ ಎರಡನೇ ತವರು ಮನೆ ಎಂದು ಸೋನಿಯಾ ಗಾಂಧಿ ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್ ಇಲ್ಲದೆ ಯಾವುದೇ ರಂಗದ ರಚನೆ ಇಲ್ಲ : ಸಂಜಯ್ ರಾವತ್​

ABOUT THE AUTHOR

...view details