ಕರ್ನಾಟಕ

karnataka

ETV Bharat / bharat

ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Sonia Gandhi Personal Secretary Accused Of Rape
Sonia Gandhi Personal Secretary Accused Of Rape

By

Published : Jun 27, 2022, 10:08 PM IST

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್‌(71) ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿಯ ದ್ವಾರಕ ಡಿಸಿಪಿ ಎಂ.ಹರ್ಷವರ್ಧನ್​ ತಿಳಿಸಿದರು.

"ಉದ್ಯೋಗ ಕೊಡಿಸುವುದಾಗಿ ಅವರು ಆಮಿಷವೊಡ್ಡಿದ್ದರು ಮತ್ತು ಮದುವೆಯಾಗುವುದಾಗಿ ನಂಬಿಸಿದ್ದರು. ಇದರ ಜೊತೆಗೆ ಅತ್ಯಾಚಾರವೆಸಗಿರುವ ಬಗ್ಗೆ ಯಾರಿಗಾದರೂ ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ" ಎಂದು ಪ್ರಾಣ ಬೆದರಿಕೆ ಹಾಕಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್.. ಮನವೊಲಿಸಿದ ಶರದ್ ಪವಾರ್​

ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್​​ 25ರಂದು ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್​ 376(ಅತ್ಯಾಚಾರ), 506(ಕ್ರಿಮಿನಲ್​ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ದೂರು ನೀಡಿರುವ ಮಹಿಳೆ ದೆಹಲಿ ನಿವಾಸಿಯಾಗಿದ್ದು 2020ರಲ್ಲಿ ಅವರ ಪತಿ ನಿಧನರಾಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಮಾಧವನ್‌, ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಹೋರ್ಡಿಂಗ್​ ಅಂಟಿಸುವ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ABOUT THE AUTHOR

...view details