ನವದೆಹಲಿ:ಭಾರತದಲ್ಲಿ ಕೋವಿಡ್ ಎರಡನೇ ಅಲೆ ಉಲ್ಬಣಿಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಪರಿಶೀಲನೆ ನಡೆಸಿದ್ದಾರೆ.
ಇಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುಯಲ್ ಸಭೆ ನಡೆಸಿರುವ ಸೋನಿಯಾ ಗಾಂಧಿ, ತಮ್ಮ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳು ಹೇಗೆ ಕೋವಿಡ್ 2ನೇ ಅಲೆ ಹಾಗೂ ವ್ಯಾಕ್ಸಿನೇಷನ್ ಡ್ರೈವ್ ಅನ್ನು ನಿಭಾಯಿಸುತ್ತಿವೆ ಎಂಬುದನ್ನು ಪರಿಶೀಲಿಸಿದರು.