ನವದೆಹಲಿ: ಗಾಂಧಿ ಕುಟುಂಬದವರು ಕೋವಿಡ್ ಲಸಿಕೆ ಪಡೆದಿದ್ದಾರಾ ಎಂದು ಬಿಜೆಪಿ ನಾಯಕರು ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ಇದಕ್ಕೆ ಸ್ಪಷ್ಟನೆ ನೀಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕೋವಿಡ್-19 ವ್ಯಾಕ್ಸಿನ್‌ನ ಎರಡೂ ಡೋಸ್‌ಗಳನ್ನು ಪಡೆದಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂತಹ ವಿಷಯಗಳಲ್ಲಿ ಅನಾವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿಸಬೇಡಿ. ದೇಶದ ಎಲ್ಲ ಪ್ರಜೆಗಳಿಗೂ ಲಸಿಕೆ ನೀಡಬೇಕಾಗಿರುವ ಕರ್ತವ್ಯವನ್ನು ಸರ್ಕಾರ ಪಾಲಿಸಬೇಕು ಎಂದು ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಮೊದಲ ಡೋಸ್ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಂದೀಪ್ ಸುರ್ಜೇವಾಲ ಹೇಳಿದ್ದಾರೆ. ರಾಹುಲ್ ಗಾಂಧಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಸರಿಯಾದ ಸಮಯಕ್ಕೆ ಲಸಿಕೆ ಪಡೆದಿದ್ದಾರೆ ಎಂದು ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ.
2021ರ ಡಿಸೆಂಬರ್ 31ರೊಳಗೆ 100 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಸಾಧಿಸಲು ಮೋದಿ ಸರ್ಕಾರ ಯಾವುದೇ ಗೊಂದಲ ಸೃಷ್ಟಿಸದೇ ದಿನಕ್ಕೆ 80 ಲಕ್ಷದಿಂದ 100 ಕೋಟಿ ಜನರಿಗೆ ಲಸಿಕೆ ನೀಡುವತ್ತ ಗಮನ ಹರಿಸಬೇಕು.
ಇದು ಲಸಿಕೆಗಳ ವಿತರಣೆಯಲ್ಲಿ ಗಮನಿಸಬೇಕಾದ ರಾಜ ನಿಯಮ. ರಾಹುಲ್ ಗಾಂಧಿಗೆ 2021 ರ ಏಪ್ರಿಲ್ 16 ರಂದು ಲಸಿಕೆ ಹಾಕಲು ನಿರ್ಧರಿಸಲಾಗಿತ್ತು. ಆದರೆ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಏಪ್ರಿಲ್ 18 ರಂದು ನಡೆಸಿದ ಆರ್‌ಟಿಪಿಸಿಆರ್ ಪರೀಕ್ಷೆಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ರಾಹುಲ್ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ವ್ಯಾಕ್ಸಿನ್ ಪಡೆಯಲಿದ್ದಾರೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.