ಕೋಲ್ಕತ್ತಾ: ಇಂದು ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ನಾಲ್ಕನೇ ಹಂತದ ಮತದಾನದಲ್ಲಿ ಈಗಾಗಲೇ ಶೇ. 60ಕ್ಕೂ ಹೆಚ್ಚು ಮತದಾನವಾಗಿದೆ. ಈ ನಡುವೆ 24 ದಕ್ಷಿಣ ಪರಗಣ ಜಿಲ್ಲೆಯ ಬರಿಷಾ ಶಶಿಭೂಷಣ ಜನಕಲ್ಯಾಣ ವಿದ್ಯಾ ಪೀಠದ ಬೂತ್ನಲ್ಲಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮತದಾನ ಮಾಡಿದರು.
24 ಪರಗಣ ಜಿಲ್ಲೆಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ದಾದಾ - ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮತದಾನ
ನಾಲ್ಕನೇ ಹಂತದ ಮತದಾನದಲ್ಲಿ ಈಗಾಗಲೇ ಶೇ. 60ಕ್ಕೂ ಹೆಚ್ಚು ಮತದಾನವಾಗಿದೆ. ಈ ನಡುವೆ 24 ದಕ್ಷಿಣ ಪರಗಣ ಜಿಲ್ಲೆಯ ಬರಿಷಾ ಶಶಿಭೂಷಣ ಜನಕಲ್ಯಾಣ ವಿದ್ಯಾ ಪೀಠದ ಬೂತ್ನಲ್ಲಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮತದಾನ ಮಾಡಿದರು.
ಸೌರವ್ ಗಂಗೂಲಿ ಮತದಾನ
ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಸೌರವ್ ಗಂಗೂಲಿ ವಿಶ್ರಾಂತಿ ಪಡೆಯುತ್ತಿದ್ದರು. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು. ಆದರೆ ಅವರು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದಾರೆ.
ಪ್ರಧಾನಿಯವರ ರ್ಯಾಲಿಗಳಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿಯೂ ಹರಡಿತ್ತು.
Last Updated : Apr 10, 2021, 6:28 PM IST