ನವದೆಹಲಿ:ನೈಋತ್ಯ ಮುಂಗಾರು ಮಾರುತಗಳು ಅವಧಿಗಿಂತಲೂ ಮುನ್ನವೇ ಚುರುಕಾಗಿವೆ. ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಗುಜರಾತ್, ಮಹಾರಾಷ್ಟ್ರದ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ತೆಲಂಗಾಣ, ರಾಯಲಸೀಮಾ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ.
ಉತ್ತರ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಗುಜರಾತ್ ರಾಜ್ಯದ ಕೆಲವು ಭಾಗಗಳು, ದಕ್ಷಿಣ ಮಧ್ಯಪ್ರದೇಶದ ಕೆಲವು ಭಾಗಗಳು, ಸಂಪೂರ್ಣ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರ್ನಾಟಕ ಮತ್ತು ತಮಿಳುನಾಡು, ವಿದರ್ಭ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಮಾನ್ಸೂನ್ ಮಾರುತಗಳು ಅತಿ ಹೆಚ್ಚು ಮಳೆ ಸುರಿಯಲಿವೆ. ಮುಂದಿನ 48 ಗಂಟೆಗಳಲ್ಲಿ ಆಂಧ್ರಪ್ರದೇಶ, ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.