ದೆಹಲಿ :ಜೂನ್ 1ರಂದು ಕೇರಳದಲ್ಲಿ ಪ್ರಾರಂಭವಾಗಬೇಕಿದ್ದ ನೈರುತ್ಯ ಮಾನ್ಸೂನ್ ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮೂರು ದಿನಗಳ ಮುಂಚಿತವಾಗಿಯೇ ಇಂದು ಕೇರಳದಲ್ಲಿ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ನೈರುತ್ಯ ಮಾನ್ಸೂನ್ ಅನ್ನು ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.
15 ದಿನಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ಅಪ್ಪಳಿಸಿದ ಅಸಾನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ನೈಋತ್ಯ ಮಾನ್ಸೂನ್ ವಾಡಿಕೆಗಿಂತ ಮುನ್ನವೇ ಮೇ 27ರಂದು ಅಥವಾ ನಾಲ್ಕು ದಿನಗಳ ಹೆಚ್ಚು ಕಡಿಮೆಯ ಅಂತರದಲ್ಲಿ ಕೇರಳಕ್ಕೆ ಪ್ರವೇಶಿಸುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.