ಸಂಭಾಲ್ (ಉತ್ತರ ಪ್ರದೇಶ):ಸಮಾಜವಾದಿ ಪಕ್ಷದ ಸಂಸದ ಸಂಭಾಲ್ ಶಫೀಕುರ್ ರೆಹಮಾನ್ ಬಾರ್ಕ್ ಅವರು ಮತ್ತೊಮ್ಮೆ ಬಿಜೆಪಿ ಕಾರ್ಯವೈಖರಿಯನ್ನು ವಿರೋಧಿಸಿದ್ದಾರೆ. ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು, ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಸ್ಪರ್ಶಿಸಿದ ಸ್ಥಳವನ್ನು 'ಶಿವಶಕ್ತಿ ಪಾಯಿಂಟ್' ಎಂದು ಹೆಸರಿಸುವ ಉದ್ದೇಶದ ಹಿಂದೆ ಕೋಮು ಬಣ್ಣವಿದೆ ಎಂದು ದೂರಿದರು.
ಚಂದ್ರಯಾನ-3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಶನಿವಾರ ಪ್ರಧಾನಿ ನರೇಂದ್ರ ಮೋದಿ, ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಸ್ಥಳವನ್ನು 'ಶಿವಶಕ್ತಿ ಪಾಯಿಂಟ್' ಎಂದು ಕರೆಯಲಾಗುತ್ತದೆ. ಚಂದ್ರಯಾನ -2 ಮಿಷನ್ ಮೂಲಕ ತನ್ನ ಹೆಜ್ಜೆಗುರುತುಗಳನ್ನು ದಾಖಲಿಸಿದ ಸ್ಥಳವನ್ನು 'ತಿರಂಗಾ ಪಾಯಿಂಟ್' ಎಂದು ಕರೆಯಲಾಗುತ್ತದೆ. ಹಾಗೆಯೇ ಆಗಸ್ಟ್ 23 ಅನ್ನು 'ರಾಷ್ಟ್ರೀಯ ಬಾಹ್ಯಾಕಾಶ ದಿನ' ಎಂದು ಘೋಷಿಸಿದ್ದರು.
ವಿಕ್ರಮ್ ಲ್ಯಾಂಡ್ ಆಗಿರುವ ಸ್ಥಳಕ್ಕೆ 'ಶಿವಶಕ್ತಿ ಪಾಯಿಂಟ್' ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಫೀಕುರ್ ರೆಹಮಾನ್ ಬಾರ್ಕ್, ಬಿಜೆಪಿಯವರು ಯಾಕೆ ಎಲ್ಲವನ್ನೂ ಕೋಮುವಾದ ಮಾಡಬಯಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.