ನವದೆಹಲಿ :ರಷ್ಯಾದ ಕೊರೊನಾ ವೈರಸ್ ಲಸಿಕೆ ಸ್ಪುಟ್ನಿಕ್ ವಿ ಸೆಪ್ಟೆಂಬರ್ ವೇಳೆಗೆ ಭಾರತದಲ್ಲಿ ಸಂಪೂರ್ಣ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಇದೆ ಎಂದು ರಷ್ಯಾದ ನೇರ ಹೂಡಿಕೆ ನಿಧಿ (ಆರ್ಡಿಐಎಫ್) ತಿಳಿಸಿದೆ.
ಸೆಪ್ಟೆಂಬರ್‌ನಲ್ಲಿ ಉತ್ಪಾದನೆಯು ಸಂಪೂರ್ಣವಾಗಿ ಬಳಕೆಗೆ ಬರುವ ನಿರೀಕ್ಷೆಯಿದೆ ಮತ್ತು ಭಾರತದ ಅತಿದೊಡ್ಡ ಲಸಿಕೆ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಗ್ಲಾಂಡ್ ಫಾರ್ಮಾ, ಹೆಟೆರೊ ಬಯೋಫಾರ್ಮಾ, ಪ್ಯಾನೇಸಿಯ ಬಯೋಟೆಕ್‌ನಂತಹ ಕಂಪನಿಗಳೊಂದಿಗೆ ಭಾರತವು ಸ್ಪುಟ್ನಿಕ್ ವಿ ಲಸಿಕೆಯ ಪ್ರಮುಖ ಉತ್ಪಾದನಾ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ ಎಂದು ಆರ್ಡಿಐಎಫ್ ತಿಳಿಸಿದೆ.
ಈ ನಡುವೆ ಭಾರತದಲ್ಲಿ 2ನೇ ಬ್ಯಾಚ್ನ ಲಸಿಕೆ ತಯಾರಿಕೆಯಲ್ಲಿ ವಿಳಂಬವಾಗಿದೆ ಎಂಬ ಕುರಿತು ಕಂಪನಿ ಪ್ರತಿಕ್ರಿಯಿಸಿದ್ದು, ಈ ರೀತಿ ಯಾವುದೇ ವಿಳಂಬ ಉಂಟಾಗಿಲ್ಲ. ಕಂಪನಿಯ ಗುರಿಯಂತೆಯೇ ಲಸಿಕೆ ತಯಾರಾಗುತ್ತಿದೆ ಎಂದು ಮಾಹಿತಿ ನೀಡಿದೆ.