ಶ್ರೀನಗರ, ಜಮ್ಮು ಕಾಶ್ಮೀರ:ಕಳೆದ ಕೆಲವು ವಾರಗಳಿಂದ ಜಮ್ಮು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರಕ್ಕೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ.
ಶ್ರೀನಗರಕ್ಕೆ ಅಮಿತ್ ಶಾ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶ್ರೀನಗರಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.