ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ಅಭ್ಯರ್ಥಿಗಳ ನೇಮಕಾತಿ ನಡೆಸುವ ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿಗೆ ಮುಂದಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್ನ ಅಡಿ 7500 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ:ಆಧಾರ್ ತಿದ್ದುಪಡಿಗೆ ಹೊಸ ನಿಯಮ.. ಒಂದು ಬಾರಿ ಮಾತ್ರ ಅವಕಾಶ, ಇಲ್ಲವಾದಲ್ಲಿ ದೆಹಲಿಗೆ ತೆರಳಬೇಕು!
ಹುದ್ದೆ ವಿವರ: ದೇಶಾದ್ಯಂತ ಖಾಲಿ ಇರುವ ಒಟ್ಟು 7,500 ಹುದ್ದೆಗಳ ಭರ್ತಿಗೆ ಎಸ್ಎಸ್ಸಿ ಸಿಜಿಎಲ್ಇ ಮುಂದಾಗಿದ್ದೆ. ಇದರ ಅನುಸಾರ ಅಸಿಸ್ಟೆಂಟ್ ಆಡಿಟ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ ಆಫೀಸರ್, ಅಕೌಂಟ್ ಸೆಲೆಕ್ಷನ್ ಆಫೀಸರ್, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಆಡಿಟರ್, ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಲಾಗುವುದು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿದ್ದು, ಗರಿಷ್ಠ 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ, ಕಾನೂನು ಪದವಿ, ಸಿಎ, ಸಿಎಂಎ, ಎಂಬಿಎ, ಮತ್ತು ಎಂಕಾಂ ಪದವಿ ಹೊಂದಿರಬೇಕು.
ಇದನ್ನು ಓದಿ:ಅಕಾಲಿಕ ಮಳೆಗೆ 5 ಲಕ್ಷ ಹೆಕ್ಟೇರ್‌ಗೂ ಅಧಿಕ ಗೋಧಿ ಬೆಳೆ ಹಾನಿ