ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ (ಎಸ್‌ಎಸ್‌ಸಿ) ಎಸ್ಎಸ್ಎಲ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಭರ್ಜರಿ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ನೇಮಕಾತಿಗೆ ಆಯೋಗವು ತಾಂತ್ರಿಕೇತರ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಮತ್ತು ಹವಾಲ್ದಾರ್ ಹುದ್ದೆಗಳಿಗೆ (ಸಿಬಿಐಸಿ ಮತ್ತು ಸಿಬಿಎನ್) ನೇಮಕಾತಿ ನಡೆಯಲಿದೆ.
ಒಟ್ಟು 1,558 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 1,198 ಎಂಟಿಎಸ್ ಮತ್ತು 360 ಹವಾಲ್ದಾರ್ ಹುದ್ದೆಗಳ ನೇಮಕಾತಿ ದೇಶಾದ್ಯಂತ ನಡೆಯಲಿದೆ. ಪ್ರತಿ ರಾಜ್ಯವಾರು ಹುದ್ದೆಗಳ ಹಂಚಿಕೆ ಮಾಡಿದ್ದು, ಅದರನುಸಾರ ಕರ್ನಾಟಕಕ್ಕೆ 52 ಹುದ್ದೆಗಳಿವೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ: 18ರಿಂದ ಗರಿಷ್ಟ ವಯೋಮಿತಿ 25 ವರ್ಷ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ವಿಧಿಸಲಾಗಿದೆ.
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರಲಿವೆ. ಬಹು ಆಯ್ಕೆ ಪ್ರಶ್ನಾಪತ್ರಿಕೆಯಲ್ಲಿ ಪರೀಕ್ಷೆ ನಡೆಯುತ್ತದೆ.
ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಪರಿಶೀಲಿಸಿ ಮುಂದುವರೆಯಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜುಲೈ 21ರಿಂದ ಆರಂಭವಾಗಿದ್ದು, ಜುಲೈ 21 ಕಡೆಯ ದಿನಾಂಕ. ಆನ್ಲೈನ್ ಶುಲ್ಕ ಪಾವತಿಗೆ ಕಡೆಯ ದಿನಾಂಕ ಜುಲೈ 22. ಕಂಪ್ಯೂಟರ್ ಆಧಾರಿತ ಪರೀಕ್ಷೆ ಸೆಪ್ಟೆಂಬರ್ನಲ್ಲಿ ನಡೆಯುವ ಸಾಧ್ಯತೆ ಇದೆ. ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು ssc.nic.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಇದನ್ನೂ ಓದಿ: IBPS Recruitment: ಪಿಎನ್ಬಿ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ 4045 ಕ್ಲರ್ಕ್ ಹುದ್ದೆಗೆ ನೇಮಕಾತಿ; ಪದವಿ ಆದವರಿಗೆ ಅವಕಾಶ