ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜ್ಯೂನಿಯರ್ ಟ್ರಾನ್ಸ್ಲೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 307 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ನಾತಕೋತ್ತರ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಜ್ಯೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ 13, ಜ್ಯೂನಿಯರ್ ಹಿಂದಿ ಟ್ರಾನ್ಸ್ಲೇಟರ್ 21, ಜ್ಯೂನಿಯರ್ ಟ್ರಾನ್ಸ್ಲೇಟರ್ 263, ಸೀನಿಯರ್ ಟ್ರಾನ್ಸ್ಲೇಟರ್ 1, ಸೀನಿಯರ್ ಹಿಂದಿ ಟ್ರಾನ್ಸ್ಲೇಟರ್ 9 ಸೇರಿದಂತೆ ಒಟ್ಟು 307 ಹುದ್ದೆಗಳಿವೆ.
ವಿದ್ಯಾರ್ಹತೆ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು.
ವೇತನ: ಜ್ಯೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಜ್ಯೂನಿಯರ್ ಹಿಂದಿ ಟ್ರಾನ್ಸ್ಲೇಟರ್, ಜ್ಯೂನಿಯರ್ ಟ್ರಾನ್ಸ್ಲೇಟರ್ ಹುದ್ದೆಗೆ 35,400 -1,12,400 ರೂ. ಹಾಗೂ ಸೀನಿಯರ್ ಟ್ರಾನ್ಸ್ಲೇಟರ್ ಮತ್ತು ಸೀನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗೆ 44,900 ರೂನಿಂದ 1,42,400 ರೂ.ವರೆಗೆ ವೇತನ ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.