ಜ್ಯೂನಿಯರ್ ಇಂಜಿನಿಯರ್ (JE) ನೇಮಕಾತಿಗೆ ಸಿಬ್ಬಂದಿ ನೇಮಕಾತಿ ಆಯೋಗ (SSC) ಅಧಿಸೂಚನೆ ಹೊರಡಿಸಿದೆ. ಆಯೋಗವು 1,324 ಜೆಇ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಭಾರತಾದ್ಯಂತ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಲ್ಕು ದಿನ ಷ್ಟೇ ಬಾಕಿ ಇದೆ. ಅಂದರೆ, ಆಗಸ್ಟ್ 16 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ: ಬಾರ್ಡರ್ ರೋಡ್ಸ್ ಆರ್ಗನೈಸೇಷನ್ನಲ್ಲಿ 486, ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್ಮೆಂಟ್ನಲ್ಲಿ 545, ಸೆಂಟ್ರಲ್ ವಾಟರ್ ಕಮಿಷನ್ 211, ಫರಕ್ಕಾ ಬ್ಯಾರೇಜ್ ಪ್ರಾಜೆಕ್ಟ್ 21, ಮಿಲಿಟರಿ ಇಂಜಿನಿಯರ್ ಸರ್ವೀಸ್ 65, ಬಂದರು ಸಚಿವಾಲಯ 8, ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೆಷನ್ 6 ಹುದ್ದೆಗಳಿವೆ.
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ ಅಥವಾ ಬಿ.ಟೆಕ್ ಅಥವಾ ಡಿಪ್ಲೊಮಾ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ ವಯೋಮಿತಿ 18. ಗರಿಷ್ಠ 32 ವರ್ಷ. ಒಬಿಸಿ ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 5ರಿಂದ 10 ವರ್ಷ ವಯೋಮಿತಿ ಸಡಿಲಿಕೆ ಇದೆ.