ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ)ಯಿಂದ ಕೇಂದ್ರ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೆಹಲಿ ಪೊಲೀಸ್ ಇಲಾಖೆ ಸಬ್ ಇನ್ಸ್ಪೆಕ್ಟರ್ ಮತ್ತು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ (ಸಿಎಪಿಎಫ್)ಗೆ ಈ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲಾಗುವುದು. ಒಟ್ಟು 1876 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆ ನೇಮಕಾತಿ ಭಾರತಾದ್ಯಂತ ನಡೆಯಲಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆ ನೇಮಕಾತಿ, ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆ ವಿವರ:ದೆಹಲಿ ಪೊಲೀಸ್ನಲ್ಲಿ ಸಬ್ ಇನ್ಸ್ಪೆಕ್ಟರ್ -162, ಸಿಎಪಿಎಫ್ನಲ್ಲಿ ಸಬ್ ಇನ್ಸ್ಪೆಕ್ಟರ್ಗೆ 1714 ಹುದ್ದೆಗಳ ನೇಮಕಾತಿ ಸೇರಿದಂತೆ ಒಟ್ಟು 1876 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 25 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ:ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಭರ್ತಿ ಮಾಡಬೇಕಿದೆ.