ಕರ್ನಾಟಕ

karnataka

ETV Bharat / bharat

ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆ ಹಿಂಪಡೆಯಲಿ: ಸಿಎಂ ಸ್ಟಾಲಿನ್ - ಕೃಷಿ ಕಾಯ್ದೆ ವಿರುದ್ಧ ಮಸೂದೆ

ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆರಂಭಿಸಲಾದ ರೈತರ ಪ್ರತಿಭಟನೆಗೆ ಮೇ 26(ಇಂದಿಗೆ) 6 ತಿಂಗಳಾದರೂ ಈವರೆಗೂ ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಮನ್ನಣೆ ನೀಡದಿರುವುದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Stalin asks Centre to take back farm laws, assures resolution in Assembly
ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆ ಹಿಂಪಡೆಯಲಿ; ಸಿಎಂ ಸ್ಟಾಲಿನ್

By

Published : May 26, 2021, 7:56 PM IST

ಚೆನ್ನೈ: ವಿವಾದಿತ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ ಆಗ್ರಹಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ತಮ್ಮ ಪಕ್ಷವು ನೀಡಿದ ಭರವಸೆಯಂತೆ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯ ಸರ್ಕಾರ ಕಾನೂನು ಪಾಸ್ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆರಂಭಿಸಲಾದ ರೈತರ ಪ್ರತಿಭಟನೆಗೆ ಮೇ 26 ಕ್ಕೆ 6 ತಿಂಗಳಾದರೂ, ಈವರೆಗೂ ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಮನ್ನಣೆ ನೀಡದಿರುವುದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಸ್ಟಾಲಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರ ನ್ಯಾಯಯುತ ಬೇಡಿಕೆಗಳಿಗೆ ಮಣಿದು ಕೇಂದ್ರ ಸರ್ಕಾರ ಈ ಕೂಡಲೇ ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿರುವ ಸ್ಟಾಲಿನ್, ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆ ಜಾರಿ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

ABOUT THE AUTHOR

...view details