ಚೆನ್ನೈ(ತಮಿಳುನಾಡು):NEET(ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ) ಭಯದಿಂದ ಕಳೆದ ಭಾನುವಾರ ತಮಿಳುನಾಡಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಚಾರ ಸದನದಲ್ಲಿ ಪ್ರತಿಧ್ವನಿಸುತ್ತಿದ್ದಂತೆ ಸಿಎಂ ಸ್ಟಾಲಿನ್ ನೇತೃತ್ವದ ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ.
ಬಿಲ್ ಮಂಡನೆ ಮಾಡಿದ ಸಿಎಂ ಸ್ಟಾಲಿನ್ ದೇಶದಲ್ಲಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಳ್ಳಬೇಕಾದರೆ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಬೇಕಾಗಿರುವುದು ಕಡ್ಡಾಯ. ಆದರೆ ತಮಿಳುನಾಡಿನಲ್ಲಿ ಇದೀಗ ಮಹತ್ವದ ಮಸೂದೆ ಪಾಸ್ ಆಗಿದೆ. ಇನ್ಮುಂದೆ ತಮಿಳುನಾಡಿನ ವಿದ್ಯಾರ್ಥಿಗಳು ಎಂಬಿಬಿಎಸ್/ಬಿಡಿಎಸ್ನಂತಹ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಳ್ಳಬೇಕಾದರೆ 12ನೇ ತರಗತಿ ಅಂಕ ಆಧರಿಸಿ ಪ್ರವೇಶ ಪಡೆದುಕೊಳ್ಳಬಹುದು.
ಇದನ್ನೂ ಓದಿ: ವಿಶ್ವಕಪ್ ಬಳಿಕ ನಿಗದಿತ ಓವರ್ಗೆ ರೋಹಿತ್ ಕ್ಯಾಪ್ಟನ್ ವದಂತಿ: ಬಿಸಿಸಿಐ ಸ್ಪಷ್ಟನೆ ಹೀಗಿದೆ..
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಮಸೂದೆ ಮಂಡನೆ ಮಾಡಿದ್ದು, ಇದಕ್ಕೆ ಎಐಎಡಿಎಂಕೆ ಬೆಂಬಲ ಸೂಚಿಸಿದ್ದು, ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಗದ್ದಲದ ನಡುವೆ ತಮಿಳುನಾಡಿನ ಅಧಿವೇಶನದಲ್ಲಿ ಬಿಲ್ ಪಾಸ್ ಆಗಿದೆ.
ನೀಟ್ ವಿಚಾರವಾಗಿ ಸದನದಲ್ಲಿ ಚರ್ಚೆ
ನೀಟ್ ಪರೀಕ್ಷೆ ರದ್ದು ಮಾಡುವುದಾಗಿ ಡಿಎಂಕೆ ಪಕ್ಷ ಭರವಸೆ ನೀಡಿತ್ತು. ಹೀಗಾಗಿ ಯಾವುದೇ ವಿದ್ಯಾರ್ಥಿ ನೀಟ್ ಪರೀಕ್ಷೆಗೆ ತಯಾರಾಗಿರಲಿಲ್ಲ ಎಂದು ಪಳನಿಸ್ವಾಮಿ ಆರೋಪ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸ್ಟಾಲಿನ್, ಈ ಹಿಂದೆ ಜಯಲಲಿತಾ ಸಿಎಂ ಆಗಿದ್ದಾಗ ನೀಟ್ ಪರೀಕ್ಷೆ ನಡೆದಿರಲಿಲ್ಲ. ಆದರೆ ಪಳನಿಸ್ವಾಮಿ ಸಿಎಂ ಆಗುತ್ತಿದ್ದಂತೆ ತಮಿಳುನಾಡಿನಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆ ನಡೆದಿತ್ತು. ಇದಾದ ಬಳಿಕ ಪ್ರತಿ ವರ್ಷವೂ ರಾಜ್ಯದಲ್ಲಿ ನೀಟ್ ಪರೀಕ್ಷೆ ನಡೆದಿದೆ. ಇದೀಗ ಹೊಸದಾಗಿ ಸ್ಟಾಲಿನ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುಂಚಿತವಾಗಿ ನೀಟ್ ಪರೀಕ್ಷೆ ರದ್ದು ಮಾಡುವುದಾಗಿ ತಿಳಿಸಿತ್ತು.
ರಾಜ್ಯದಲ್ಲಿ ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲೇ ಧನುಷ್ (ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ) ಎರಡು ಸಲ ನೀಟ್ ಪರೀಕ್ಷೆ ಬರೆದಿದ್ದರು. ಆದರೆ ಎರಡು ಸಲ ಫೇಲ್ ಆಗಿದ್ದಾರೆ ಎಂದು ತಿಳಿಸಿದರು. ಇದರ ಬೆನ್ನಲ್ಲೇ ಅಧಿವೇಶನದಲ್ಲಿ ನೀಟ್ ತಗೆದು ಹಾಕುವ ಮಸೂದೆ ಮಂಡನೆ ಮಾಡಿದರು. ಇದಕ್ಕೆ ಎಐಎಡಿಎಂಕೆ ಪಕ್ಷದಿಂದ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಮಸೂದೆಗೆ ಅಂಗೀಕಾರ ದೊರೆತಿದೆ.