ಚೆನ್ನೈ:ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡುವವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳ ಮೂರು ದಿನಗಳ ಚಿಂತನ ಮಂಥನ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಷಯದಲ್ಲಿ ತಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ತಮಿಳುನಾಡಿನಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ತಿಳಿಸಿದರು.
ಸೈಕೋಟ್ರೋಪಿಕ್ ಪದಾರ್ಥಗಳ ಪ್ರಭಾವದಿಂದ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳನ್ನು ತಮ್ಮ ಸರ್ಕಾರ ಅನುಮತಿಸುವುದಿಲ್ಲ ಎಂದು ಇದೇ ವೇಳೆ ಹೇಳಿದರು.