ಜಮ್ಮು( ಜಮ್ಮು ಕಾಶ್ಮೀರ) : ಹೊಸ ವರ್ಷದ ಮೊದಲ ದಿನದಂದೇ ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರದ ಕಟ್ಟಡದ ಬಳಿಯಿರುವ ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 12 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ.
ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯಾದ ಡಾ.ಗೋಪಾಲ್ ದತ್ ಪ್ರಕಾರ, ಸಾವಿನ ನಿಖರವಾದ ಅಂಕಿಅಂಶಗಳ ಬಗ್ಗೆ ಸರಿಯಾದ ಮಾಹಿತಿ ಇನ್ನೂ ಬಂದಿಲ್ಲ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಯಲಿದೆ. ಸುಮಾರು 20 ಮಂದಿ ಗಾಯಾಳುಗಳನ್ನು ಕತ್ರಾದ ಕಮ್ಯುನಿಟಿ ಹೆಲ್ತ್ ಸೆಂಟರ್ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ದುರಂತದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ನಿಖರ ಅಂಕಿ ಅಂಶ ಬಹಿರಂಗವಾಗಿಲ್ಲ. ಕಾಲ್ತುಳಿತ ಹೇಗೆ ಸಂಭವಿಸಿತು ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.