ಚೆನ್ನೈ(ತಮಿಳುನಾಡು): ತಮಿಳುನಾಡಿನ ನಾಲ್ಕು ವಲಯಗಳಲ್ಲಿ ತಲಾ ಒಂದರಂತೆ ನಾಲ್ಕು ಒಲಿಂಪಿಕ್ ತರಬೇತಿ ಅಕಾಡೆಮಿಗಳು ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೇ, ರಾಜ್ಯಾದ್ಯಂತ ಕ್ರೀಡಾ ತರಬೇತಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಕ್ರೀಡಾಪಟುಗಳು ಮತ್ತು ಯುವಕರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಮಧ್ಯಮ ವರ್ಗದ ಮಕ್ಕಳಿಗೂ ಅನುಕೂಲವಾಗುವಂತೆ ಕ್ರೀಡಾ ಸೌಕರ್ಯಗಳನ್ನು ನಮ್ಮ ಸರ್ಕಾರ ಕಲ್ಪಿಸಲಿದೆ. ಅಂತರರಾಷ್ಟ್ರೀಯ ಗುಣಮಟ್ಟದ ತರಬೇತಿಯನ್ನು ತಮಿಳುನಾಡಿನ ಯುವಕರು ಪಡೆಯಬೇಕು. ಹಾಗೆ ಅವರು ಕ್ರೀಡೆಗಳಲ್ಲಿ ಗೆಲುವು ಸಾಧಿಸಬೇಕೆಂಬುವುದೇ ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.