ಮುಂಬೈ :ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ಶಿವಾಜಿ ಪಾರ್ಕ್ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಸರ್ಕಾರಿ ಗೌರವವನ್ನು ಸಲ್ಲಿಸಿದ ಬಳಿಕ ಲತಾ ಮಂಗೇಶ್ಕರ್ ಅವರ ಸಹೋದರ ಹೃದಯನಾಥ್ ಮಂಗೇಶ್ಕರ್ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಹೃದಯನಾಥ್ ಮಂಗೇಶ್ಕರ್ ಅವರ ಪುತ್ರ ಆದಿನಾಥ್ ಮಂಗೇಶ್ಕರ್ ಸ್ವೀಕರಿಸಿದರು.
ಇದನ್ನೂ ಓದಿ:ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ, ಸಿಎಂ ಉದ್ಧವ್ ಠಾಕ್ರೆ, ಶಾರುಖ್ ಖಾನ್, ಶ್ರದ್ಧಾ ಕಪೂರ್, ಆಶಾ ಭೋಂಸ್ಲೆ, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಂತಿಮ ನಮನ ಸಲ್ಲಿಸಿದರು.
ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಲತಾ ಮಂಗೇಶ್ಕರ್ ಅವರಿಗೆ ಸಂತಾಪ ಸೂಚಿಸುವ ಸಲುವಾಗಿ ಎರಡು ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆ ಆಚರಿಸಲಾಗುತ್ತದೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರವು ನಾಳೆ ಫೆ. 7ರಂದು ರಜೆ ಘೋಷಿಸುವ ಮೂಲಕ ಶೋಕ ವ್ಯಕ್ತಪಡಿಸಲು ನಿರ್ಧರಿಸಿದೆ.