ಕರ್ನಾಟಕ

karnataka

ETV Bharat / bharat

ಕೋವಿಡ್​ನಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ 50 ಸಾವಿರ ರೂ.ಪರಿಹಾರ : ಸುಪ್ರೀಂಕೋರ್ಟ್​ಗೆ ಕೇಂದ್ರದ ಮಾಹಿತಿ - ಸುಪ್ರೀಂಕೋರ್ಟ್​ಗೆ ಕೇಂದ್ರ ಮಾಹಿತಿ

ಕೋವಿಡ್​ನಿಂದ ಸಾವನ್ನಪ್ಪಿರುವ ಬಿಪಿಎಲ್​ ಕಾರ್ಡ್​​​ದಾರರಿಗೆ ರಾಜ್ಯದಲ್ಲಿ ಈಗಾಗಲೇ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಭಾರತದಲ್ಲಿ ಕೊರೊನಾ ವೈರಸ್​ನಿಂದಾಗಿ ಈವರೆಗೆ 4.46 ಲಕ್ಷ ಜನರು ಸಾವನ್ನಪ್ಪಿದ್ದಾರೆ.

Covid Death
Covid Death

By

Published : Sep 22, 2021, 6:25 PM IST

ನವದೆಹಲಿ :ಕೊರೊನಾ ವೈರಸ್​ನಿಂದ ದೇಶದಲ್ಲಿ ಸಾವನ್ನಪ್ಪಿರುವ ಪ್ರತಿಯೊಬ್ಬರ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರವನ್ನ ರಾಜ್ಯ ಸರ್ಕಾರಗಳು ನೀಡಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ.

ಸುಪ್ರೀಂಕೋರ್ಟ್​​ಗೆ ಕೇಂದ್ರದಿಂದ ಮಾಹಿತಿ

ಈಗಾಗಲೇ ಸಂಭವಿಸಿರುವ ಸಾವುಗಳಿಗೆ ಮಾತ್ರವಲ್ಲದೇ ಭವಿಷ್ಯದಲ್ಲಿ ಸಂಭವಿಸುವ ಸಾವುಗಳಿಗೂ ಪರಿಹಾರ ನೀಡಲಾಗುವುದು ಎಂದು ಸರ್ವೋನ್ನತ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ.

ಈ ಹಣ ರಾಜ್ಯ ಸರ್ಕಾರದಿಂದಲೇ ಪಾವತಿಯಾಗಲಿದೆ. ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ನಿಧಿಯಿಂದ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಥವಾ ಜಿಲ್ಲಾಡಳಿತಗಳ ಮೂಲಕ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವ ಬಿಪಿಎಲ್​ ಕಾರ್ಡ್​​​ದಾರರಿಗೆ ರಾಜ್ಯದಲ್ಲಿ ಈಗಾಗಲೇ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಭಾರತದಲ್ಲಿ ಕೊರೊನಾ ವೈರಸ್​ನಿಂದಾಗಿ ಈವರೆಗೆ 4.46 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿರಿ:ಪಾಕ್ ಸರಣಿ ರದ್ದು ಮಾಡಿಕೊಂಡ ನ್ಯೂಜಿಲ್ಯಾಂಡ್​​​: ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ

ABOUT THE AUTHOR

...view details