ಕರ್ನಾಟಕ

karnataka

ETV Bharat / bharat

ಉತ್ತರಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ: ಗ್ರಾಮಸ್ಥರಿಂದ ಪ್ರತಿಭಟನೆ - ಉತ್ತರ ಪ್ರದೇಶ ಸುದ್ದಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಧ್ವಂಸಗೊಳಿಸಿದ ಆರೋಪದಲ್ಲಿ ಉತ್ತರ ಪ್ರದೇಶವೊಂದರ ಗ್ರಾಮದ ಜನತೆ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ: ಗ್ರಾಮಸ್ಥರಿಂದ ಪ್ರತಿಭಟನೆ

By

Published : Jun 22, 2021, 2:39 PM IST

ಲಖನೌ(ಉತ್ತರ ಪ್ರದೇಶ): ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪರಿಚಿತ ದುಷ್ಕರ್ಮಿಗಳು ಹಾನಿ ಉಂಟುಮಾಡಿದ್ದು, ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಬಲ್ಲಿಯಾ ಜಿಲ್ಲೆಯ ರಾಂಪುರ್ ಅಸ್ಲಿ ಗ್ರಾಮದಲ್ಲಿ ಸೋಮವಾರ ರಾತ್ರಿ ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಲಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಗಡ್ವಾರ್ - ನಾಗ್ರಾ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಡೆಲ್ಟಾ ಆಯ್ತು, ಇದೀಗ 'ಡೆಲ್ಟಾ ಪ್ಲಸ್' ವೈರಸ್ ಪತ್ತೆ!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರನ್ನು ಮನವೊಲಿಸಿ, ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ABOUT THE AUTHOR

...view details