ಕರ್ನಾಟಕ

karnataka

ETV Bharat / bharat

ಭಾರತದಲ್ಲಿ ಕೃಷಿ ಮಾರುಕಟ್ಟೆಗಳ ದಕ್ಷತೆ ಸುಧಾರಿಸುವ ಕ್ರಮಗಳನ್ನು ಸ್ವಾಗತಿಸಿದ ಅಮೆರಿಕ - ವಿದೇಶಾಂಗ ಇಲಾಖೆಯ ವಕ್ತಾರ

ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಯುನೈಟೆಡ್ ಸ್ಟೇಟ್ಸ್ ಸ್ವಾಗತಿಸುತ್ತದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

protest
protest

By

Published : Feb 4, 2021, 12:24 PM IST

ವಾಷಿಂಗ್ಟನ್ (ಯು.ಎಸ್): ಶಾಂತಿಯುತ ಪ್ರತಿಭಟನೆಗಳು ಪ್ರವರ್ಧಮಾನಕ್ಕೆ ಬರುತ್ತಿರುವುದು ಪ್ರಜಾಪ್ರಭುತ್ವದ ಲಕ್ಷಣವೆಂದು ಗುರುತಿಸಿರುವ ಅಮೆರಿಕ ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಹೇಳಿದೆ.

"ಸಾಮಾನ್ಯವಾಗಿ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಯುನೈಟೆಡ್ ಸ್ಟೇಟ್ಸ್ ಸ್ವಾಗತಿಸುತ್ತದೆ" ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಅಧ್ಯಕ್ಷ ಬೈಡನ್ ಸರ್ಕಾರವು ಕೃಷಿ ಕ್ಷೇತ್ರವನ್ನು ಸುಧಾರಿಸುವ ಭಾರತ ಸರ್ಕಾರದ ಕ್ರಮವನ್ನು ಬೆಂಬಲಿಸುತ್ತದೆ ಎಂದು ಇದು ಸೂಚಿಸುತ್ತದೆ.

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಇಲಾಖೆ, ಪಕ್ಷಗಳ ನಡುವಿನ ಯಾವುದೇ ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಲು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.

ABOUT THE AUTHOR

...view details