ಪಹಲ್ಗಾಮ್(ಜಮ್ಮು-ಕಾಶ್ಮೀರ) :ನಟ ಇಮ್ರಾನ್ ಹಶ್ಮಿ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಗ್ರೌಂಡ್ ಜೀರೋ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡಾ ದಾಖಲಾಗಿದೆ.
ಪಹಲ್ಗಾಮ್ನಲ್ಲಿ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ - ಈಟಿವಿ ಭಾರತ್ ಕನ್ನಡ
ಗ್ರೌಂಡ್ ಜೀರೋ ಚಿತ್ರದ ಚಿತ್ರೀಕರಣಕ್ಕೆ ತೆರಳಿದ್ದ ಇಮ್ರಾನ್ ಹಶ್ಮಿ ಮೇಲೆ ಜಮ್ಮು ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.
ಜಮ್ಮು-ಕಾಶ್ಮೀರ : ಪಹಲ್ಗಾಮ್ನಲ್ಲಿ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ
ಮೂಲಗಳ ಪ್ರಕಾರ, ಶೂಟಿಂಗ್ ಮುಗಿಸಿ ಪಹಲ್ಗಾಮ್ ಮುಖ್ಯ ಮಾರುಕಟ್ಟೆಗೆ ಹೋದಾಗ ಅಪರಿಚಿತರು ಇಮ್ರಾನ್ ಹಸ್ಮಿ ಮೇಲೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೆಕ್ಷನ್ 147, 148, 370, 336, 323 ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಗ್ರೌಂಡ್ ಜೀರೋ ಚಿತ್ರವನ್ನು ತೇಜಸ್ ದಿಯೋಸ್ಕರ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ :ರಾಮನಿಗಿಂತಲೂ ಮೊದಲು ಸಿಎಂ ಯೋಗಿ ಮಂದಿರ ನಿರ್ಮಾಣ