ನವದೆಹಲಿ :ದೇಶಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗ್ತಿದೆ. ಈ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ ಸಂಭವಿಸಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಸಾರ್ವಜನಿಕರು ಸೇರಿದಂತೆ ಕೆಲ ಪೊಲೀಸರಿಗೆ ಗಾಯಗಳಾಗಿವೆ.
ಮೆರವಣಿಗೆ ವೇಳೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಕಲ್ಲು ತೂರಾಟ ಮಾಡಲಾಗಿದೆ. ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿ ಮಾಡಲು ಮುಂದಾದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದಾರೆ. ಘಟನೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದು, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶ ನೀಡಿದ್ದಾರೆ. ಇದೇ ವೇಳೆ ಪರಸ್ಪರ ಶಾಂತಿ ಕಾಪಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.