ಮುಂಬೈ:ಲಾಕ್‌ಡೌನ್ ಹೊರತಾಗಿಯೂ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿರುವ ಕಾರಣದಿಂದಾಗಿ ಮಹಾರಾಷ್ಟ್ರದಲ್ಲಿ ಈ ಮೊದಲೇ ವಿಧಿಸಿದ್ದ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ.
ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ತುರ್ತು ಕಾಯ್ದೆ ಅಡಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಮುಂದಿನ ದಿನಗಳಲ್ಲಿ ಕಡಿಮೆಯಾಗುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.
ನಿರ್ಬಂಧಗಳ ವೇಳೆ ಏನು ತೆರೆದಿರುತ್ತದೆ..?
ಜನರು ಕಾರಣವಿಲ್ಲದೇ ಸುತ್ತಾಡುವುದನ್ನು ತಡೆಯಲು ಕೇವಲ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಸಮಯಾವಕಾಶ ನೀಡಲಾಗಿದೆ. ಆಹಾರ ಮಳಿಗೆಗಳು ಮೊದಲು ರಾತ್ರಿ 8 ಗಂಟೆಯವರೆಗೆ ತೆರೆಯಲು ಅವಕಾಶವಿದ್ದು, ಈಗ ಕೇವಲ 4 ಗಂಟೆಗಳ ಅವಕಾಶ ನೀಡಲಾಗಿದೆ. ಬೆಳಗ್ಗೆ 7ರಿಂದ 8 ರವರೆಗೆ ಹೋಮ್ ಡಿಲಿವರಿಗೆ ಅವಕಾಶವಿದೆ.