ದಕ್ಷಿಣ 24 ಪರಗಣ (ಪಶ್ಚಿಮ ಬಂಗಾಳ):ದೇಶದಬಹುತೇಕ ಎಲ್ಲ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳು ಪುನಾರಂಭಗೊಂಡಿವೆ. ಆನ್‌ಲೈನ್ ತರಗತಿಗಳು ಮುಕ್ತಾಯ ಕಂಡಿವೆ. ಮಕ್ಕಳಿಗೆ ನೀಡಲಾಗಿದ್ದ ಮೊಬೈಲ್ ಫೋನ್ಗಳನ್ನು ಪೋಷಕರು ತಮ್ಮ ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
ಇದೇ ರೀತಿ, ಪಶ್ಚಿಮ ಬಂಗಾಳದಲ್ಲಿ ತಾಯಿಯೋರ್ವಳು ತನ್ನ ಮಗಳಿಗೆ ನೀಡಿದ್ದ ಮೊಬೈಲ್ ಫೋನನ್ನು ವಾಪಸ್ ಪಡೆದುಕೊಂಡಿದ್ದಾರೆ. ಆದರೆ, ಇದರಿಂದ ನೊಂದ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಜ್ಯದ ದಕ್ಷಿಣ 24 ಪರಗಣ ಜಿಲ್ಲೆಯ ಬಡ್ಜ್ ಪುರಸಭೆ ವ್ಯಾಪ್ತಿಯ ಬಲೂರ್ಘಾಟ್ನಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸುಭಾಷ್ ಮಂಡಲ್ ತನ್ನ ಪತ್ನಿ ರಾನು ಹಾಗೂ ಮೂವರು ಮಕ್ಕಳೊಂದಿಗೆ ಬಲೂರ್ಘಾಟ್ನಲ್ಲಿ ವಾಸವಾಗಿದ್ದರು. ರಾನು ಸ್ಥಳೀಯ ಅಂಗಡಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು.
ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಲಾಕ್ಡೌನ್ ಆಗಿದ್ದರಿಂದ ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಯುತ್ತಿದ್ದ ಕಾರಣ ಮಗಳಿಗೆ ಮೊಬೈಲ್ ಫೋನ್ ಕೊಡಿಸಿದ್ದಾರೆ. ಆದರೀಗ ಶಾಲೆಗೆ ಹೋಗುತ್ತಿರುವ ಕಾರಣ ಮೊಬೈಲ್ ವಾಪಸ್ ಪಡೆದುಕೊಂಡಿದ್ದಾರೆ. ಇದರಿಂದ ಮನನೊಂದ ಮಗಳು ನೇಣಿಗೆ ಶರಣಾಗಿದ್ದಾಳೆ. ತಕ್ಷಣವೇ ಮುನ್ಸಿಪಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಾಗಲೇ ಆಕೆ ಸಾವನ್ನಪ್ಪಿದ್ದಳು. ಮೃತದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.