ಆಂಧ್ರಪ್ರದೇಶ:ತಿರುಪತಿ ಜಿಲ್ಲೆಯ ಗುಡೂರು ಆದಿಶಂಕರ ಕಾಲೇಜಿನಲ್ಲಿ ಎರಡು ಬಣಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಒಂದು ಗುಂಪಿಗೆ ಬೆಂಬಲವಾಗಿ ಹೊರಗಿನಿಂದ ಮೂವರು ಚಾಕು ಹಿಡಿದು ಕಾಲೇಜಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಹೊರಗಿನಿಂದ ಬಂದವರ ಮೇಲೆ ಕಾಲೇಜು ವಿದ್ಯಾರ್ಥಿಗಳು ಮುಗಿಬಿದ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಬಳಿಕ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಆಂಧ್ರಪ್ರದೇಶ: ಕಾಲೇಜು ಆವರಣದಲ್ಲಿ ಚಾಕು ಹಿಡಿದು ವಿದ್ಯಾರ್ಥಿಗಳ ಹೊಡೆದಾಟ - ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ
ಆದಿಶಂಕರ ಕಾಲೇಜಿನ ವಿದ್ಯಾರ್ಥಿಗಳು ಎರಡು ಬಣಗಳಾಗಿ ಹೊಡೆದಾಡಿಕೊಂಡಿದ್ದಾರೆ.
ಆದಿ ಶಂಕರ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ
ಘಟನೆ ಎರಡು ದಿನಗಳ ನಂತರ ಬೆಳಕಿಗೆ ಬಂದಿದೆ. ಘರ್ಷಣೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಈವರೆಗೂ ಗೌಪ್ಯವಾಗಿಟ್ಟಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಆಗಾಗ ಘರ್ಷಣೆಗಳು ನಡೆಯುತ್ತಿವೆ. ಈಗ ಕಾಲೇಜಿಗೆ ಚಾಕು ಹಿಡಿದು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಕಾಲೇಜು ಆಡಳಿತ ಮಂಡಳಿ ಕ್ಯಾರೇ ಎನ್ನುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಇದು ಮೂರನೇ ಘಟನೆಯಾಗಿದೆ.