ಲಖನೌ (ಉತ್ತರ ಪ್ರದೇಶ) : ಮೂಲ ಶಿಕ್ಷಣ ಪರಿಷತ್ತಿನ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಉತ್ತರ ಪ್ರದೇಶದ 1 ರಿಂದ 8 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಮೂಲ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಪ್ರತಾಪ್ ಸಿಂಗ್ ಬಘೇಲ್ ಗುರುವಾರ ಆದೇಶ ಹೊರಡಿಸಿದ್ದಾರೆ.
"2022-23ರ ಶೈಕ್ಷಣಿಕ ಅವಧಿಯಲ್ಲಿ 1 ರಿಂದ 8 ನೇ ತರಗತಿಯವರೆಗೆ ಯಾವುದೇ ವಿದ್ಯಾರ್ಥಿಯ ಬಡ್ತಿಯನ್ನು ಮಂಡಳಿ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ನಿಲ್ಲಿಸಲಾಗುವುದಿಲ್ಲ. ಈ ಮೂಲಕ ರಾಜ್ಯದಲ್ಲಿ ಲಕ್ಷಾಂತರ ಮಕ್ಕಳು ಮುಂದಿನ ತರಗತಿಗೆ ಬಡ್ತಿ ಪಡೆಯಲಿದ್ದಾರೆ" ಎಂದು ತಿಳಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆಯಡಿ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲು ಅವಕಾಶವಿರುವುದರಿಂದ ಪ್ರತಿ ವರ್ಷ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಆದೇಶದ ಪ್ರಕಾರ, 2022-23ರ ಶೈಕ್ಷಣಿಕ ಅವಧಿಯಲ್ಲಿ 1 ರಿಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳ ಬಡ್ತಿಯನ್ನು ಎಲ್ಲಾ ಕೌನ್ಸಿಲ್ ಮತ್ತು ಕೌನ್ಸಿಲ್ ಅಡಿಯಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಶಾಲೆಗಳು ಕ್ಯಾನ್ಸಲ್ ಮಾಡಲು ಸಾಧ್ಯವಿಲ್ಲ. ನಿಯಮಾನುಸಾರ ಮುಂದಿನ ತರಗತಿಗೆ ಪ್ರವೇಶ ನೀಡಲಾಗುವುದು. ಇದಲ್ಲದೆ, ವಾರ್ಷಿಕ ಪರೀಕ್ಷೆ ಮತ್ತು ಮೌಲ್ಯಮಾಪನದ ಆಧಾರದ ಮೇಲೆ ವಿದ್ಯಾರ್ಥಿಗಳ ವರದಿ ಕಾರ್ಡ್ ವಿತರಿಸಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ :ಪಿಯು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದ ಶಿಕ್ಷಣ ಸಚಿವ