ನವದೆಹಲಿ:ದೇಶಾದ್ಯಂತದ ಶಾಲಾ-ಕಾಲೇಜುಗಳಿಂದ ಸುಮಾರು 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನೇರವಾಗಿ ನೋಡುವ ಹಾಗೂ ಗಣರಾಜ್ಯೋತ್ಸವದ ಮೆರವಣಿಗೆ ವೀಕ್ಷಿಸುವ ಅವಕಾಶ ಸಿಕ್ಕಿದೆ. ಈ ಕುರಿತಂತೆ ಶಿಕ್ಷಣ ಸಚಿವಾಲಯ ಮಾಹಿತಿ ನೀಡಿದೆ.
ಪ್ರತಿವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವದ ಮೆರವಣಿಗೆ ನೇರವಾಗಿ ವೀಕ್ಷಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ದೇಶಾದ್ಯಂತದ ಪ್ರತಿಭಾನ್ವಿತ 100 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಶಾಲಾ ಮಟ್ಟದಿಂದ 50 ಮತ್ತು ಉನ್ನತ ಶಿಕ್ಷಣ ಮಟ್ಟದಿಂದ 50 ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿದೆ. ಇವರು ಪ್ರಧಾನಿಮಂತ್ರಿ ಮೋದಿಯವರು ಜೊತೆ ಕುಳಿತುಕೊಂಡು ಪರೇಡ್ ಮೆರವಣಿಗೆಯನ್ನು ವೀಕ್ಷಿಸಲಿದ್ದಾರೆ.
ಅಷ್ಟೇ ಅಲ್ಲದೆ ಈ ವಿದ್ಯಾರ್ಥಿಗಳು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಭೇಟಿ ಮಾಡಲು ಮತ್ತು ಸಂವಹನ ನಡೆಸಲು ಅವಕಾಶ ಸಿಗಲಿದೆ. ಈ ಕುರಿತಂತೆ ಶಿಕ್ಷಣ ಸಚಿವಾಯಲ ಟ್ವೀಟ್ ಮಾಡಿ ಮಾಹಿತಿ ನೀಡಿದೆ.