ನವದೆಹಲಿ:ಕೋವಿಡ್ ವ್ಯಾಕ್ಸಿನ್ಗಳ ಮಿಶ್ರಣ ಮತ್ತು ಹೊಂದಾಣಿಕೆಯಿಂದ ಉತ್ತಮ ಫಲಿತಾಂಶಗಳು ದೊರಕಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನ ವರದಿಯೊಂದರ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಮುಂದಿನ ಸಂಶೋಧನೆಗಳಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ.
ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೋವಿಡ್ ಲಸಿಕೆಗಳಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಐಸಿಎಂಆರ್ ಹೇಳಿದ್ದು, ಅಡೆನೋವೈರಸ್ ವೆಕ್ಟರ್ ಆಧಾರದಲ್ಲಿ ಸಂಶೋಧಿಸಲಾದ ವ್ಯಾಕ್ಸಿನ್ಗಳ ಮಿಶ್ರಣದಿಂದ ವೈರಸ್ ಅನ್ನು ನಿಷ್ಕ್ರಿಯಗೊಳಿಸುವುದು ಮಾತ್ರವಲ್ಲದೇ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಅಧಿಕವಾಗುತ್ತದೆ ಎಂದು ತಿಳಿಸಿದೆ.