ಕೋಲ್ಕತ್ತಾ(ಪಶ್ಚಿಮ ಬಂಗಾಳ):ಸದಾ ಒಂದಿಲ್ಲೊಂದು ವಿಷಯವನ್ನಿಟ್ಟುಕೊಂಡು ಬಿಜೆಪಿ ಮೇಲೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹರಿಹಾಯುತ್ತಿರುತ್ತಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ನಿನ್ನೆ ದೀದಿ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ಫೋಟೋ ಸಹ ಶೇರ್ ಮಾಡಿಕೊಂಡಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಕಳೆದ ಕೆಲ ತಿಂಗಳಿಂದ ಬಿಜೆಪಿ ಬ್ರಿಗೇಡ್ನಿಂದ ಕಡೆಗಣಿಸಲ್ಪಟ್ಟಿದ್ದಾರೆ. ಹೀಗಾಗಿ, ಅವರು ತೃಣಮೂಲ ಕಾಂಗ್ರೆಸ್ ಸೇರುತ್ತಾರೆಂಬ ಊಹಾಪೋಹ ಸಹ ಹರಿದಾಡ್ತಿವೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರೊಂದಿಗೆ ಭೇಟಿ, ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.
ಫೋಟೋ ಶೇರ್ ಮಾಡಿರುವ ಸುಬ್ರಮಣಿಯನ್:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿರುವ ಕೆಲವೊಂದು ಫೋಟೋ ಸ್ವಾಮಿ ಅವರೇ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾನು ಕೋಲ್ಕತ್ತಾದಲ್ಲಿದ್ದೆ. ಮಮತಾ ಬ್ಯಾನರ್ಜಿ ಅವರನ್ನ ಭೇಟಿಯಾಗಿದ್ದೇನೆ. ಅವರು ಧೈರ್ಯಶಾಲಿ. ಸಿಪಿಎಂ ವಿರುದ್ಧದ ಅವರ ಹೋರಾಟ ನಿಜಕ್ಕೂ ಶ್ಲಾಘನೀಯ ಎಂದು ಬರೆದುಕೊಂಡಿದ್ದಾರೆ.