ಚಂಡೀಗಢ (ಪಂಜಾಬ್):ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಪಂಜಾಬ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. 2015 ರಲ್ಲಿ ದಾಖಲಾದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪಂಜಾಬ್ ಪೊಲೀಸರ ತಂಡ ಖೈರಾ ನಿವಾಸದ ಮೇಲೆ ದಾಳಿ ನಡೆಸಿತ್ತು.
ಮಾಹಿತಿಯ ಪ್ರಕಾರ, ಪಂಜಾಬ್ ಪೊಲೀಸರು ಗುರುವಾರ ಬೆಳಗ್ಗೆ ಖೈರಾ ಅವರ ಚಂಡೀಗಢ ನಿವಾಸದ ಮೇಲೆ ದಾಳಿ ನಡೆಸಿದರು. ನಂತರ ಅವರನ್ನು ಬಂಧಿಸಿ ಜಲಾಲಾಬಾದ್‌ಗೆ ಕರೆದೊಯ್ದರು. ಭೋಲಾತ್‌ನ ಕಾಂಗ್ರೆಸ್ ಶಾಸಕನನ್ನು ಜಲಾಲಾಬಾದ್ನ ಫಜಿಲ್ಕಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಳಿಕ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ವೇಳೆ ಪೊಲೀಸರು ಏಳು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಕಾಂಗ್ರೆಸ್ ನಾಯಕ ಸುಖಪಾಲ್ ಸಿಂಗ್ ಖೈರಾ ಅವರನ್ನು 2015 ರ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇವರು ಕಿಸಾನ್ ಸೆಲ್‌ನ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ. ಈ ಹಿಂದೆಯೂ ಕೂಡ ಖೈರಾ ವಿವಾದಗಳಲ್ಲಿ ಸಿಲುಕಿದ್ದರು. 2015 ರಲ್ಲಿ ಇವರ ವಿರುದ್ಧ ಡ್ರಗ್ಸ್ ಕಳ್ಳಸಾಗಣೆ ಪ್ರಕರಣ ದಾಖಲಾಗಿತ್ತು. ಫಾಜಿಲ್ಕಾ ನ್ಯಾಯಾಲಯ ಅವರಿಗೆ ಸಮನ್ಸ್ ಕೂಡ ಜಾರಿ ಮಾಡಿತ್ತು. ಕಳ್ಳಸಾಗಣೆದಾರರಿಂದ 2 ಕೆಜಿ ಹೆರಾಯಿನ್, 24 ಚಿನ್ನದ ಬಿಸ್ಕತ್‌ಗಳು, ಎರಡು ಪಾಕಿಸ್ತಾನಿ ಸಿಮ್ ಕಾರ್ಡ್‌ಗಳು ಮತ್ತು ಕಂಟ್ರಿ ನಿರ್ಮಿತ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.