ನವದೆಹಲಿ: ಸುಲ್ಲಿ ಡೀಲ್ಸ್ ಆ್ಯಪ್ ಸೃಷ್ಟಿಕರ್ತ ಹಾಗೂ ಪ್ರಕರಣದ ರೂವಾರಿ ಓಂಕಾರೇಶ್ವರ್ ಠಾಕೂರ್ನನ್ನು ಇಂದೋರ್ನಲ್ಲಿ ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ.
ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರ ಒಪ್ಪಿಗೆಯಿಲ್ಲದೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವುದು ಹಾಗು ಆನ್‌ಲೈನ್‌ನಲ್ಲಿ ಹರಾಜು ಹಾಕುವುದು ಈ ಸುಲ್ಲಿ ಡೀಲ್ಸ್ ಖದೀಮರ ಕೆಲಸವಾಗಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 'ಸುಲ್ಲಿ ಡೀಲ್ಸ್' ಆ್ಯಪ್ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ನನ್ನು ಡಿಸಿಪಿ ಕೆಪಿಎಸ್ ಮಲ್ಹೋತ್ರಾ, ಐಎಫ್‌ಎಸ್‌ಒ ಹಾಗೂ ದೆಹಲಿ ಪೊಲೀಸರ ವಿಶೇಷ ತಂಡ ಕಾರ್ಯಚರಣೆ ನಡೆಸಿ ಹಡೆಮುರಿ ಕಟ್ಟಿದೆ.
ಕಳೆದ ಕೆಲ ದಿನಗಳ ಹಿಂದೆ ಸುಲ್ಲಿ ಡೀಲ್ಸ್ ರೀತಿಯೇ ಟ್ವಿಟರ್ ಹ್ಯಾಂಡಲ್ನಲ್ಲಿ ಬುಲ್ಲಿ ಬಾಯಿ ಹೆಸರಿನಲ್ಲಿ ಖಾತೆ ಸೃಷ್ಟಿಸಿ ಮಹಿಳಾ ಪತ್ರಕರ್ತೆಯ ಚಿತ್ರಗಳನ್ನು ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ:Bulli Bai App Case: ನನ್ನ ಅಕ್ಕ ನಿರಪರಾಧಿ ಎಂದ ಆರೋಪಿ ಸಹೋದರಿ!