ಹೈದರಾಬಾದ್:ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಕೋವಿಡ್ ಪಾಸಿಟಿವ್
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಕೋವಿಡ್ ಸೋಂಕು ಬಾಧಿಸಿದ್ದು, ಕೋವಿಡ್ ಲಸಿಕೆ ಪಡೆಯದವರು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳುವಂತೆ ಅಭಿಮಾನಿಗಳು, ಹಿತೈಷಿಗಳಲ್ಲಿ ಮನವಿ ಮಾಡಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಕೋವಿಡ್ ಪಾಸಿಟಿವ್
ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ಸೌಮ್ಯ ರೋಗಲಕ್ಷಣರಹಿತ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆಗೆ ಒಳಗಾಗುವಂತೆ ಮಹೇಶ್ ಬಾಬು ಸೂಚಿಸಿದ್ದಾರೆ. ಇದ್ರ ಜೊತೆಗೆ, ಇನ್ನೂ ಯಾರೆಲ್ಲಾ ಕೋವಿಡ್ ಲಸಿಕೆ ಪಡೆದಿಲ್ಲವೋ ಕೂಡಲೇ ಲಸಿಕೆ ಪಡೆದುಕೊಳ್ಳಿ. ಇದರಿಂದ ಆಸ್ಪತ್ರೆಗೆ ದಾಖಲಾಗುವ ಅಪಾಯ ಸಾಧ್ಯವಾದಷ್ಟು ಕಡಿಮೆ ಮಾಡಬಹುದು ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.